ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಬಂದಿದೆ.
ಸದ್ಯ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಈ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕ ಅಂತಿಮ ಮತದಾರರ ಪಟ್ಟಿ ನಾಳೆ ಪ್ರಕಟ: ಮತದಾರರೇ, ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!
ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ದಾಖಲಾಗಿದ್ದೇಕೆ?
ಲಭ್ಯವಿರುವ ವರದಿಗಳ ಪ್ರಕಾರ, ಡಾ. ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆದರೆ ಅವರಿಗೆ ಕಾಣಿಸಿಕೊಂಡ ಆರೋಗ್ಯ ಸಮಸ್ಯೆ ಏನು? ಯಾವ ಕಾರಣಕ್ಕೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ? ಎಂಬ ಬಗ್ಗೆ ಈವರೆಗೆ ಸ್ಪಷ್ಟವಾದ ವೈದ್ಯಕೀಯ ಮಾಹಿತಿ ಇಲ್ಲಿ ತಿಳಿಯೋಣ.
2026ರ ಬೆಳೆ ಪರಿಹಾರ ಸ್ಟೇಟಸ್ ಮೊಬೈಲ್‌ನಲ್ಲೇ ಚೆಕ್ ಮಾಡಿ; ಇಲ್ಲಿದೆ ಡೈರೆಕ್ಟ್ ಲಿಂಕ್
ಹೀಗಾಗಿ ಅವರ ಆರೋಗ್ಯದ ಬಗ್ಗೆ ಅಧಿಕೃತ ವೈದ್ಯಕೀಯ ಮಾಹಿತಿ ಹೊರಬರುವವರೆಗೆ ಯಾವುದೇ ಊಹಾಪೋಹಗಳನ್ನು ನಂಬದಿರುವುದು ಉತ್ತಮ.
ಆಸ್ಪತ್ರೆಗೆ ಭೇಟಿ ನೀಡಿದ ಪ್ರಮುಖ ನಾಯಕರು
ಪರಮೇಶ್ವರ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಅವರ ಆರೋಗ್ಯದ ಸ್ಥಿತಿಗತಿ ಮತ್ತು ಮುಂದಿನ ಚಿಕಿತ್ಸೆಯ ಕುರಿತು ಆಸ್ಪತ್ರೆ ಅಥವಾ ಕುಟುಂಬದ ಕಡೆಯಿಂದ ಅಧಿಕೃತ ಮಾಹಿತಿ ಬಂದರೆ ಹೆಚ್ಚಿನ ವಿವರಗಳು ತಿಳಿಯಲಿವೆ.
ಡಾ. ಜಿ. ಪರಮೇಶ್ವರ್ ಯಾರು?
ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕದ ಪ್ರಮುಖ ರಾಜಕೀಯ ನಾಯಕರಲ್ಲಿ ಒಬ್ಬರು. ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಗೃಹ ಸಚಿವರಾಗಿಯೂ ವಿವಿಧ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ರಾಜ್ಯದ ರಾಜಕೀಯದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಅವರ ಆರೋಗ್ಯದ ಕುರಿತು ಈಗ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.
ಪರಮೇಶ್ವರ್ ಅವರ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ಬಂದಿದೆಯೇ?
ಸದ್ಯ ಲಭ್ಯವಿರುವ ಮಾಧ್ಯಮ ವರದಿಗಳ ಪ್ರಕಾರ, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಆಗಿರುವ ಪರಮೇಶ್ವರ್ ಅವ್ರನ್ನು ಅವರ ಪತ್ನಿ ಭೇಟಿ ಮಾಡಿ ಅರೋಗ್ಯ ವಿಚಾರಣೆ ಮಾಡಿದ್ದಾರೆ.
ಹಾಗೆಯೇ ಆಸ್ಪತ್ರೆಯಲ್ಲಿ ಡಿಸಿಎಂ ಅವರನ್ನು ತಪಾಸಣೆ ಮಾಡಿದ ವೈದ್ಯರು ಅವರ ಅರೋಗ್ಯ ಸುಧಾರಿಸಿದೆ, ಇಂದೇ ಅವರನ್ನು ಡಿಸ್ಚಾರ್ಜ್ ಮಾಡುತ್ತೇವೆ, ಯಾವುದೇ ಗೊಂದಲ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ republic kannada ಸುದ್ದಿ ವಾಹಿನಿಯಲ್ಲಿ ಮಾಹಿತಿ ಪ್ರಸಾರವಾಗಿದೆ.